ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ(ಸ್ಟೆನೋಗ್ರಾಫರ್) 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2021 ರ ಡಿಸೆಂಬರ್ 27 ರಿಂದ 2022 ರ ಜನವರಿ 30 ರ ರಾತ್ರಿ 11.59 ರವರೆಗೆ ಸಲ್ಲಿಸಬಹುದು.
ಅಭ್ಯರ್ಥಿಯು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ 35 ವರ್ಷಗಳು, 2ಎ, 2ಬಿ, 3ಎ, 3ಬಿ ಗೆ 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ 40 ವರ್ಷ ಗರಿಷ್ಟ ವಯೋಮಿತಿ ಇರುತ್ತದೆ.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ., ಪ್ರವರ್ಗ-2ಎ, 2ಬಿ ಮತ್ತು 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವಿರುತ್ತದೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಕೆ, ಸೂಚನೆಗಳು, ವಯೋಮಿತಿ ಸಡಿಲಿಕೆ, ಹುದ್ದೆ ವರ್ಗೀಕರಣ, ಆಯ್ಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‍ಸೈಟ್ ಗಮನಿಸಬಹುದಾಗಿದೆ.