alex Certify ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಸನ್ನೆ ಮಾಡಿ ಯುವಕರನ್ನು ಕರೆಯುತ್ತಿದ್ದ ಮಹಿಳೆಗೆ ಜೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಸನ್ನೆ ಮಾಡಿ ಯುವಕರನ್ನು ಕರೆಯುತ್ತಿದ್ದ ಮಹಿಳೆಗೆ ಜೈಲು

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 30 ವರ್ಷದ ಮಹಿಳೆ ಸಾರ್ವಜನಿಕ ಪ್ರದೇಶದಲ್ಲಿ ಮಾಡಬಾರದ ಕೆಲಸ ಮಾಡಿದ್ದಾಳೆ. ಇದು ಆಕೆಗೆ ದುಬಾರಿಯಾಗಿ ಪರಿಣಮಿಸಿದೆ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಕೆಲಸ ಮಾಡ್ತಿದ್ದ ಮಹಿಳೆಗೆ ಕೋರ್ಟ್ ಎರಡು ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಕೃತ್ಯವೆಸಗುತ್ತಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಮಹಿಳೆಯನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಕೋರ್ಟ್, ಮಹಿಳೆಗೆ ಎರಡು ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 5 ಸಾವಿರ ರೂಪಾಯಿ ದಂಡ ವಿಧಿಸಿದೆ. ಒಂದು ವೇಳೆ ಮಹಿಳೆ ದಂಡ ನೀಡದೆ ಹೋದಲ್ಲಿ 7 ದಿನಗಳ ಕಾಲ ಜೈಲಿನಲ್ಲಿರಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಸನ್ನೆ ಮಾಡಿ ಯುವಕರನ್ನು ಮಹಿಳೆ ತನ್ನ ಬಳಿ ಕರೆಯುತ್ತಿದ್ದರಂತೆ. ಘಟನೆ ಸೆಪ್ಟೆಂಬರ್ 25,2016 ರಂದು ನಡೆದಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ಕೆಲಸ ಮಾಡುವುದು ಕಾನೂನು ಬಾಹಿರ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...