
ಗಾಝಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತೀವ್ರವಾಗಿ ಟೀಕಿಸಿದ್ದಾರೆ. ಅವರು ಐಸಿಜೆ ಆದೇಶವನ್ನು ಖಂಡಿಸಿದರು ಮತ್ತು ಅದನ್ನು ಅತಿರೇಕ ಎಂದು ತಳ್ಳಿಹಾಕಿದರು.
ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ದೇಶ ಮತ್ತು ನಮ್ಮ ಜನರನ್ನು ರಕ್ಷಿಸಲು ಅಗತ್ಯವಿರುವ ಯಾವುದೇ ಕ್ರಮವನ್ನು ನಾವು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ. “ಇಸ್ರೇಲ್, ಎಲ್ಲಾ ದೇಶಗಳಂತೆ, ತನ್ನನ್ನು ರಕ್ಷಿಸಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದೆ. ಅಂತರರಾಷ್ಟ್ರೀಯ ನ್ಯಾಯಾಲಯವು ಈ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಸ್ರೇಲ್ ತನ್ನ ಪಡೆಗಳು ಗಾಝಾದಲ್ಲಿ ನರಮೇಧ ನಡೆಸದಂತೆ ನೋಡಿಕೊಳ್ಳಬೇಕು ಮತ್ತು ಮಾನವೀಯ ಪರಿಸ್ಥಿತಿಯನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಐಸಿಜೆ ತೀರ್ಪು ನೀಡಿತು. ಆದೇಶವನ್ನು ಎತ್ತಿಹಿಡಿಯುವ ಕ್ರಮಗಳ ಬಗ್ಗೆ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಐಸಿಜೆ ಇಸ್ರೇಲ್ ಗೆ ಸೂಚಿಸಿದೆ. ಗಾಝಾದಲ್ಲಿ ನಡೆದ ಮಾನವ ದುರಂತದ ಬಗ್ಗೆ ನ್ಯಾಯಾಲಯಕ್ಕೆ ಸಂಪೂರ್ಣ ಅರಿವಿದೆ ಮತ್ತು ನರಮೇಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಐಸಿಜೆ ಅಧ್ಯಕ್ಷ ಜಾನ್ ಡೊನೊಗ್ ಹೇಳಿದ್ದಾರೆ. ಆದರೆ ಇಸ್ರೇಲ್ ನ್ಯಾಯಾಲಯದ ಆದೇಶವನ್ನು ತಿರಸ್ಕರಿಸಿತು ಮತ್ತು ಇಸ್ರೇಲ್ ತನ್ನನ್ನು ರಕ್ಷಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತದೆ ಎಂದು ಹೇಳಿದರು.