ಮಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಿನಿಮಾ ರೂಪದಲ್ಲಿ ಬರುತ್ತಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.
ಲವ ಎಂಬುವವರು ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ಗಾಗಿ ಅರ್ಜಿ ಸಲ್ಲಿಸಿದ್ದು, ‘ ಸ್ಟೋರಿ ಆಫ್ ಸೌಜನ್ಯಾ’ ಟೈಟಲ್ ನೋಂದಣಿ ಮಾಡಿಸಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಜಿ.ಕೆ. ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಟೈಟಲ್ ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀರ್ಷಿಕೆಯನ್ನು ಕೊಡುವಂತೆ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆ ಎಂಟ್ರಿಯಾಗಿದ್ದು, ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧರಿಸಿದೆ.ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸಾಕ್ಷಾಧಾರಗಳ ಕೊರತೆ ಹಿನ್ನೆಲೆ ಆರೋಪಿ ಸಂತೋಷ್ ರಾವ್ ನನ್ನು ನಿರ್ದೋಷಿ ಎಂದು ಬೆಂಗಳೂರಿನ ಸಿಬಿಐ ಕೋರ್ಟ್ ನ್ಯಾಯಮೂರ್ತಿ ಸಿಬಿ ಸಂತೋಷ್ ಆದೇಶ ಹೊರಡಿಸಿದ್ದರು.
ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012 ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ನಂತರ ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಅನುಮಾನದ ಮೇರೆಗೆ ಸಮೀಪದ ಮನೆಯಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.