ನವದೆಹಲಿ: ಸೆಪ್ಟೆಂಬರ್ ನಿಂದ ಎರಡು ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗುವುದು. ಸೆಪ್ಟೆಂಬರ್ ವೇಳೆಗೆ ಎರಡು ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ ಎಂದು ದೆಹಲಿಯ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.
ಈಗಾಗಲೇ 12 ರಿಂದ 18 ವರ್ಷದ ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ ಆರಂಭವಾಗಿದ್ದು, ಈ ನಡುವೆ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಂದಿದ್ದು, ಇದು ಶೇಕಡ 77.8 ರಷ್ಟು ಪರಿಣಾಮಕಾರಿಯಾಗಿದೆ ಎಂದು ಹೇಳಲಾಗಿದ್ದು, ಸೆಪ್ಟೆಂಬರ್ ವೇಳೆಗೆ ಎರಡು ವರ್ಷದ ಪುಟ್ಟ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.