ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುನ್ನೆಚ್ಚರಿಕೆ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ.
ದೀರ್ಘಕಾಲದ ಅನಾರೋಗ್ಯ ಇರುವವರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸಿನ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಕಡಿಮೆಯಾಗುತ್ತಿದೆ. 60 ವರ್ಷ ಮೇಲ್ಪಟ್ಟವರು, ಅಸ್ವಸ್ಥರು, ಹೃದಯ, ಶ್ವಾಶಕೋಶ ಮೊದಲಾದ ಸಮಸ್ಯೆ ಇರುವವರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಪ್ರಸ್ತುತ ವಾತಾವರಣ ಉಸಿರಾಟದ ಕಾಯಿಲೆ ಸೇರಿ ಕೋವಿಡ್ ಹರಡುವಿಕೆಗೆ ಪೂರಕವಾಗಿದ್ದು, ಉಸಿರಾಟದ ತೊಂದರೆ, ಶೀತ ಜ್ವರ ಲಕ್ಷಣ ಇರುವವರು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.