![](https://kannadadunia.com/wp-content/uploads/2017/11/cm-si.jpg)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಹಾಗೂ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿನ ಕೊರೊನಾ ಚಿಕಿತ್ಸಾ ದರ ನಿಗದಿ ಹಾಗೂ ಆರ್ ಟಿಪಿಸಿಆರ್ ಪರೀಕ್ಷಾ ಶುಲ್ಕ ನಿಗದಿ, ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ವೈದ್ಯಕೀಯ ಪರಿಕರಗಳಿಗೆ ಹಣಕಾಸು ಇಲಾಖೆ ಅನುಮೋದನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಆಚರಣೆ ಕುರಿತು ಚರ್ಚೆಯು ನಡೆಯಲಿದೆ ಎಂದು ತಿಳಿದುಬಂದಿದೆ.