alex Certify ಕೋವಿಡ್ ಆರೈಕೆ ಕೇಂದ್ರದಲ್ಲಿ ಆಘಾತಕಾರಿ ಘಟನೆ: ಸರಿಯಾಗಿ ಚಿಕಿತ್ಸೆ ನೀಡದ ನರ್ಸ್ ಗೆ ಚಾಕುವಿನಿಂದ ಇರಿದ ಸೋಂಕಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಆರೈಕೆ ಕೇಂದ್ರದಲ್ಲಿ ಆಘಾತಕಾರಿ ಘಟನೆ: ಸರಿಯಾಗಿ ಚಿಕಿತ್ಸೆ ನೀಡದ ನರ್ಸ್ ಗೆ ಚಾಕುವಿನಿಂದ ಇರಿದ ಸೋಂಕಿತ

ಮುಂಬೈ: ಕೋವಿಡ್ ಆರೈಕೆ ಕೇಂದ್ರವೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರಿಯಾಗಿ ಚಿಕಿತ್ಸೆ ನೀಡದ ನೀಡದ ನರ್ಸ್ ಮೇಲೆ ಕೊರೋನಾ ಸೋಂಕಿತನೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಮುಂಬೈ ಪೊಲೀಸರ ಪ್ರಕಾರ, ಹಲ್ಲೆಗೊಳಗಾದ ನರ್ಸ್ ಗೆ ಗಾಯಗಳಾಗಿದ್ದು ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ನರ್ಸ್ ಮೇಲೆ ಹಲ್ಲೆ ಮಾಡಿದ್ದು ಏಕೆ ಎಂದು ಆರೋಪಿಯನ್ನು ಪ್ರಶ್ನಿಸಿದಾಗ ಕೋವಿಡ್ ಆರೈಕೆ ಕೇಂದ್ರದಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಆತ ತಿಳಿಸಿರುವುದಾಗಿ ಮುಂಬೈ ಪೊಲೀಸರು ಹೇಳಿದ್ದಾರೆ. ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಯನ್ನು ಬಂಧಿಸಿಲ್ಲ. ನಂತರದಲ್ಲಿ ಕ್ರಮಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...