ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವ 18 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಕೋವಿಡ್-19 ಸೋಂಕಿಗೆ ತುತ್ತಾಗುವ ಹೆಚ್ಚಿನ ಅಪಾಯದಂಚಿನಲ್ಲಿರುತ್ತಾರೆ. ಆದ್ದರಿಂದ ಫಲಾನುಭವಿಗಳಿಗೆ ಕೊಡಗು ಜಿಲ್ಲೆಗೆ 220 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದ್ದು, ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಈಗಾಗಲೇ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದ ಫಲಾನುಭವಿಗಳು 06 ತಿಂಗಳುಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯುಬಹುದು. ಕೋರ್ಬಿವ್ಯಾಕ್ಸ್ ಲಸಿಕೆಯು ಜಿಲ್ಲಾ ಆಸ್ಪತ್ರೆ, ಮಡಿಕೇರಿ 100(ಡೋಸ್), ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ 60(ಡೋಸ್) ಮತ್ತು ಸಾರ್ವಜನಿಕ ಆಸ್ಪತ್ರೆ, ವಿರಾಜಪೇಟೆ 60(ಡೋಸ್) ಲಭ್ಯವಿರುತ್ತದೆ.
ಲಭ್ಯವಿರುವ ಕೋರ್ಬಿವ್ಯಾಕ್ಸ್ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಜಿಲ್ಲಾ ಆಸ್ಪತ್ರೆ, ಮಡಿಕೇರಿ ಮತ್ತು ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ ಮತ್ತು ವಿರಾಜಪೇಟೆಗೆ ಭೇಟಿ ನೀಡಿ ಜನವರಿ, 04 ರಿಂದ ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಅವರು ತಿಳಿಸಿದ್ದಾರೆ.