ನೈನಿತಾಲ್ ಹಾಗೂ ಮುಸ್ಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಉತ್ತಾರಖಂಡ್ ಹೈಕೋರ್ಟ್ ಆದೇಶ ನೀಡಿದೆ.
ನ್ಯಾಯಮೂರ್ತಿ ರವೀಂದ್ರ ಮೈಥಾನಿ, ರವಿಕುಮಾರ್ ಮಾಲಿಮಠ್ ನೇತೃತ್ವದ ಪೀಠ ಈ ಆದೇಶವನ್ನ ಹೊರಡಿಸಿದೆ.
ಉತ್ತಾರಖಂಡ್ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಸೆಪ್ಟೆಂಬರ್ ತಿಂಗಳಿನಿಂದ ಪ್ರವಾಸಿಗರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಿರಲಿಲ್ಲ. ಆದರೆ, ಇದಾದ ಬಳಿಕ ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದರಿಂದ ಇದೀಗ ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನ ಕಡ್ಡಾಯಗೊಳಿಸಲಾಗಿದೆ.