ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 692 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಏರಿಕೆಯಾಗಿದ್ದು, 4,097 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು ಸಾವುಗಳು ವರದಿಯಾಗಿವೆ – ಮಹಾರಾಷ್ಟ್ರದಲ್ಲಿ ಇಬ್ಬರು, ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಆರು ಸಾವುಗಳೊಂದಿಗೆ ಭಾರತದಲ್ಲಿ ಕೋವಿಡ್ -19 ಪ್ರಕರಣಗಳಿಂದಾಗಿ ಒಟ್ಟು ಸಾವಿನ ಸಂಖ್ಯೆ 5,33,346 ಕ್ಕೆ ಏರಿದೆ.