ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋಣ ಲಸಿಕೆ ನೀಡಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಆರಂಭದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ಅನೇಕ ರಾಜ್ಯಗಳಿಂದ ಒತ್ತಡ ಕೇಳಿಬಂದ ಹಿನ್ನಲೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.
ಮೇ 1 ರಿಂದ ಕೋವಿಡ್ ವ್ಯಾಕ್ಸಿನೇಷನ್‌ನ 3 ನೇ ಹಂತದ ಅಭಿಯಾನ ಆರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.