ನವದೆಹಲಿ: ಜನವರಿಯಿಂದ ಕೊರೋನಾ ಲಸಿಕೆ ವಿತರಣೆ ಆರಂಭವಾಗಲಿದೆ. ಅಕ್ಟೋಬರ್ ವೇಳೆಗೆ ದೇಶ ಸಹಜತೆಗೆ ಮರಳಲಿದೆ ಎನ್ನುವ ವಿಶ್ವಾಸ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಓ ಆದಾರ್ ಪೂನಾವಾಲಾ ಅವರದ್ದಾಗಿದೆ.
2021 ರ ಜನವರಿಯಲ್ಲಿ ಭಾರತದಲ್ಲಿ ಕೊರೋನಾ ಲಸಿಕೆಯ ತುರ್ತು ನೀಡಿಕೆ ಆರಂಭವಾಗಲಿದೆ. ಅಕ್ಟೋಬರ್ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ. ನಂತರ ಕೊರೋನಾ ಪೂರ್ವ ಸಹಜ ಸ್ಥಿತಿಗೆ ಮರಳಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಉತ್ಪಾದನೆ ಸಂಸ್ಥೆಯಾಗಿರುವ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ, ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೋವಿಶೀಲ್ಡ್ ಲಸಿಕೆ ಬಳಕೆಗೆ ಈ ತಿಂಗಳಾಂತ್ಯಕ್ಕೆ ಅನುಮತಿ ಸಿಗುವ ನಿರೀಕ್ಷೆ ಇದೆ ಎನ್ನಲಾಗಿದೆ.