ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಭರದಿಂದ ಸಾಗಿದ್ದು, ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ ತೀವ್ರತರ ಕಾಯಿಲೆ ಹೊಂದಿದವರಿಗೆ ಲಸಿಕೆ ನೀಡಲಾಗುವುದು.
ಇಂದು ಮತ್ತು ನಾಳೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗುವುದು. ಕೋವಿನ್ ಆಪ್ ಅಪ್ಡೇಟ್ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ದೇಶದಲ್ಲಿ ಲಸಿಕೆ ನೀಡುವುದಿಲ್ಲ. ಕೋವಿನ್ 1.0, ನಿಂದ 2.0 ಗೆ ಅಪ್ಡೇಟ್ ಮಾಡಲಾಗುತ್ತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆಪ್ ಅಪ್ಡೇಟ್ ಹಿನ್ನೆಲೆಯಲ್ಲಿ ಎರಡು ದಿನ ಲಸಿಕೆ ನೀಡುವುದಿಲ್ಲ ಎಂದು ಹೇಳಲಾಗಿದೆ.