alex Certify BIG NEWS: ದೇಶಾದ್ಯಂತ ಕೊರೋನಾ ಲಸಿಕೆ ನೀಡಿಕೆಗೆ ಬ್ರೇಕ್, ಆಪ್ ಅಪ್ಡೇಟ್ ಕಾರಣ 2 ದಿನ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶಾದ್ಯಂತ ಕೊರೋನಾ ಲಸಿಕೆ ನೀಡಿಕೆಗೆ ಬ್ರೇಕ್, ಆಪ್ ಅಪ್ಡೇಟ್ ಕಾರಣ 2 ದಿನ ಸ್ಥಗಿತ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಭರದಿಂದ ಸಾಗಿದ್ದು, ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ ತೀವ್ರತರ ಕಾಯಿಲೆ ಹೊಂದಿದವರಿಗೆ ಲಸಿಕೆ ನೀಡಲಾಗುವುದು.

ಇಂದು ಮತ್ತು ನಾಳೆ ಕೊರೋನಾ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗುವುದು. ಕೋವಿನ್ ಆಪ್ ಅಪ್ಡೇಟ್ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ದೇಶದಲ್ಲಿ ಲಸಿಕೆ ನೀಡುವುದಿಲ್ಲ. ಕೋವಿನ್ 1.0, ನಿಂದ 2.0 ಗೆ ಅಪ್ಡೇಟ್ ಮಾಡಲಾಗುತ್ತಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆಪ್ ಅಪ್ಡೇಟ್ ಹಿನ್ನೆಲೆಯಲ್ಲಿ ಎರಡು ದಿನ ಲಸಿಕೆ ನೀಡುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...