ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಇದುವರೆಗೆ 51 ಕೋಟಿ 45 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ನಗರಗಳಿಗಿಂತ ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚು ಗಮನ ನೀಡ್ತಿವೆ.
ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿಯ ಪ್ರಕಾರ, ಶೇಕಡಾ 60 ಕ್ಕಿಂತ ಹೆಚ್ಚು ಲಸಿಕೆಗಳನ್ನು ಹಳ್ಳಿಗಳಲ್ಲಿ ನೀಡಲಾಗುತ್ತಿದೆ. ಪ್ರತಿ 10 ಡೋಸ್‌ಗಳಲ್ಲಿ 6 ಲಸಿಕೆಗಳನ್ನು ಗ್ರಾಮೀಣ ಜನರಿಗೆ ನೀಡಲಾಗುತ್ತದೆ. ಕೇಂದ್ರ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 54 ದಿನಗಳಲ್ಲಿ 9.61 ಕೋಟಿ ಡೋಸ್‌ಗಳನ್ನು ಗ್ರಾಮೀಣ ಪ್ರದೇಶಗಳಿಗೆ ನೀಡಲಾಗಿದೆ ಎಂಬ ಮಾಹಿತಿ ತಿಳಿಸಿದೆ. ಪ್ರತಿದಿನ ಸರಾಸರಿ 17.81 ಲಕ್ಷ ಲಸಿಕೆಗಳನ್ನು ನೀಡಲಾಗಿದೆ.
ಕೊರೊನಾ ಲಸಿಕೆಯ ಕೊನೆಯ ಮೂರು ವಾರಗಳ ಡೇಟಾ ಗಮನಿಸಿದ್ರೆ ಅದರಲ್ಲಿ ದೊಡ್ಡ ಬದಲಾವಣೆ ಕಾಣಬಹುದು. ಗ್ರಾಮೀಣ ಲಸಿಕಾ ಅಭಿಯಾನದಲ್ಲಿ ಭಾರೀ ಏರಿಕೆಯಾಗಿದೆ. ಕಳೆದ ಮೂರು ವಾರಗಳಲ್ಲಿ ಒಟ್ಟು 9.87 ಕೋಟಿ ಡೋಸ್‌ಗಳಲ್ಲಿ, 6.22 ಕೋಟಿ ಡೋಸ್‌ಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರತಿದಿನ ಸರಾಸರಿ 29.66 ಲಕ್ಷ ಲಸಿಕೆಗಳನ್ನು ನೀಡಲಾಗುತ್ತಿದೆ.