ನನ್ನ ವಿರುದ್ಧ ಸರ್ಕಾರ ರಾಜಕೀಯ ದ್ವೇಷ ಸಾಧಿಸುತ್ತಿದೆ; ಪಾರ್ಟನರ್ ಶಿಪ್ ರೂಪದಲ್ಲಿ ಕಾಂಗ್ರೆಸ್ ನಲ್ಲಿ ಭ್ರಷ್ಟಾಚಾರ ನಡೆದಿದೆ: ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ ಕೋವಿಡ್ ಹಗರಣ ಕುರಿತ ತನಿಖಾ ವರದಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಆರೋಗ್ಯ ಸಚಿವ, ಸಂಸದ ಡಾ.ಕೆ.ಸುಧಾಕರ್, ಈ ಸರ್ಕಾರ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಸುಧಾಕರ್, ಈ ಸರ್ಕಾರ ಏನಾದರೂ ಸತ್ಯಹರಿಶ್ಚಂದ್ರ ಸರ್ಕಾರಾನಾ? ಈಗ ರಾಜ್ಯದಲ್ಲಿರುವುದು ದರೋಡೆಕೋರರ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ನಾನು ಯಾವುದೇ ಕಾನೂನುಬಾಹಿರ ತಪ್ಪು ಮಾಡಿಲ್ಲ. ಕೋವಿಡ್ ವೇಳೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೂ ನನ್ನ ವಿರುದ್ಧ ಕಾಂಗ್ರೆಸ್ ನವರು ಅನಗತ್ಯ ಆರೋಪ ಮಾಡುತ್ತಿದ್ದಾರೆ. ಇವರೇನು ಶಾಶ್ವತವಾಗಿ ಅಧಿಕಾರದಲ್ಲಿರುತ್ತಾರಾ? ಈ ರೀತಿ ದ್ವೇಷದ ರಾಜಕಾರಣ ಮಡುತ್ತಿರುವುದದರೂ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಪರ್ಸಂಟೇಜ್ ರೂಪದಲ್ಲಿ ಭ್ರಷ್ಟಾಚಾರವಾಗಿದೆ ಎಂದು ಕೆಲವರು ಆರೋಪಿಸಿದ್ದಾರೆ. ಈಗಿನ ಸರ್ಕಾರದಲ್ಲಿ ಪಾರ್ಟನರ್ ಶಿಪ್ ರೂಪದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read