alex Certify BIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ JN.1 ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 66 ಜನರಲ್ಲಿ JN.1 ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ JN.1 ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನದಲ್ಲಿ ಮತ್ತೆ 600ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 628 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು 66 ಜನರಲ್ಲಿ ಕೊರೊನಾ ರೂಪಾಂತರ ವೈರಸ್ JN.1 ಪತ್ತೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಇನ್ನು ಸಕ್ರಿಯ ಪ್ರಕರಣ 4170ಕ್ಕೆ ಏರಿಕೆಯಾಗಿದೆ. ಈವರೆಗೆ 44472153 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 533337 ಜನರು ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ 220,67,79,081 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...