ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೇರಳದಲ್ಲಿ ರೂಪಾಂತರ ವೈರಸ್ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೊರೊನಾ ಉಪತಳಿ ಆತಂಕ ಶುರುವಾಗಿದೆ.
ನಾಳೆಯಿಂದ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಲಿದೆ. ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದರೆ ವೈದ್ಯರ ಸಲಹೆ ಪಡೆದುಕೊಳ್ಳುವಂತೆ ಆರೊಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ಇದೇ ವೇಳೆ ಕೋವಿಡ್ ರೂಪಾಂತರ ವೈರಸ್ JN.1 ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿದ್ದಾರೆ. JN.1 ವೈರಸ್ ಜಾಗತಿಕವಾಗಿ ವೇಗವಾಗಿ ಹರಡುತ್ತಿದೆ. ನವೆಂಬರ್ ತಿಂಗಳಲ್ಲಿ ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ.10ರಷ್ಟಿದ್ದ ಈ ವೈರಸ್ ಡಿಸೆಂಬರ್ ನಲ್ಲಿ ಶೇ.30ರಷ್ಟಾಗಿದೆ. ಅತಿ ವೇಗವಾಗಿ ಸೋಂಕು ಹರಡುತ್ತಿದೆ ಎಂದು ಹೇಳಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿಯೂ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲಾಗುತ್ತಿದೆ. ನಮ್ಮಲ್ಲಿ ಟೆಸ್ಟಿಂಗ್ ಹೆಚ್ಚಿಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.