ನವದೆಹಲಿ: ದೇಶಾದ್ಯಂತ ಮಹಾಮಾರಿ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದೆ. ಅದರಲ್ಲಿಯೂ ಕೇರಳದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಕೋವಿಡ್ ಉಪತಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಕೋವಿಡ್ ಉಪತಳಿ JN.1 ಗೆ ಕೇರಳದಲ್ಲಿ ಇನ್ನೋರ್ವ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು 24 ಗಂಟೆಯಲ್ಲಿ 127 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದೇಶದಲ್ಲಿ ಕಳೆದ ಒಂದು ದಿನದಲ್ಲಿ 260 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆಕ್ಟೀವ್ ಕೇಸ್ ಗಳ ಸಂಖ್ಯೆ 1,970ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈವರೆಗೆ 533318 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. 44470076 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.2,206,779,081 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.