ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ನಿನ್ನೆ 9 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ 5,30,509 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 14,515 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,16,492 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 23,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,73,08,120 ಡೋಸ್ ಲಸಿಕೆ ಹಾಕಲಾಗಿದೆ.