alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್‌ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್‌ ಹೆಚ್ಚಳ

ನವದೆಹಲಿ: ಕಳೆದ ಎರಡು ದಿನಗಳಿಂದ ಕೊಂಚ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 57 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,167 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,45,026 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 20,742 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,32,67,571 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 27,37,235 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,02,79,61,722 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...