ನವದೆಹಲಿ: ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ವಾರದ ಎಲ್ಲ ದಿನವೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ.
ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು ಮತ್ತು ಹೆಚ್ಚು ಅವಧಿ ಅಂಗಡಿಗಳು ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕ್ರಮಕೈಗೊಂಡಿದೆ. ಬಡವರಿಗೆ ಆಹಾರಧಾನ್ಯಗಳು ಸಕಾಲದಲ್ಲಿ ಉಚಿತವಾಗಿ ಮತ್ತು ಸುರಕ್ಷಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.
ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸರಿಯಾಗಿ ಪಡಿತರ ವಿತರಣೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.