ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಉಪಕರಣ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅವರನ್ನು ಅಮಾನತು ಮಾಡಲಾಗಿದೆ.
ಪಿಪಿಇ ಕಿಟ್ ಖರೀದಿ ಇತರೆ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮ, ಕೋವಿಡ್ ನಿರ್ವಹಣೆಯಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಆಯೋಗ ಮಧ್ಯಂತರ ವರದಿಯನ್ನು ಸಿಎಂಗೆ ಸಲ್ಲಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ. ಸುಧಾಕರ್ ವಿರುದ್ಧ ಅಕ್ರಮದ ಆರೋಪ ಮಾಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಉಪಕರಣ ಖರೀದಿ, ಕೋವಿಡ್ ಉಪಕರಣ, ಟೆಸ್ಟ್ ಕಿಟ್ ಗಳ ಖರೀದಿ ಸೇರಿ ಹಲವು ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಇದೀಗ ಓರ್ವ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿದೆ.