ಬೆಂಗಳೂರು: ಕೋವಿಡ್ ಹಗರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ, ಕಿಟ್ ಖರೀದಿ, ಔಷಧಿ, ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬುದು ನ್ಯಾ.ಕುನ್ಹಾ ನೇತೃತ್ವದ ತನಿಖಾ ಆಯೋಗ ನೀಡಿರುವ ವರದಿಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದರು. ಈ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು, ಬಸವರಾಜ್ ಬೊಮ್ಮಾಯಿ, ಡಾ.ಕೆ.ಸುಧಾಕರ್ ಅವರಿಗೆ ಸಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.