ಚಂಡಿಗಢ: ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರ ಆತಂಕವನ್ನುಂಟು ಮಾಡಿದೆ. ಪಂಜಾಬ್ ನಲ್ಲಿಯೂ ಸೋಂಕಿತರ ಪ್ರಮಾಣ ತೀವ್ರ ಏರಿಕೆಯಾಗುತ್ತಿದೆ. ಸೋಂಕು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ನೈಟ್ ಕರ್ಫ್ಯೂ ರಾಜ್ಯಾದ್ಯಂತ ವಿಸ್ತರಿಸಲಾಗಿದೆ.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬುಧವಾರ ಈ ಬಗ್ಗೆ ಆದೇಶಿಸದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಎಲ್ಲಾ ರಾಜಕೀಯ ಸಮಾವೇಶ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ರಾಜಕೀಯ ಸಮಾವೇಶ ನಡೆಸಿದಲ್ಲಿ ನಾಯಕರನ್ನು ಬಂಧಿಸಲು ಸೂಚಿಸಲಾಗಿದೆ. 12 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಅದನ್ನು ರಾಜ್ಯಾದ್ಯಂತ ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.