ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ನೇತೃತ್ವದಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯ ನಂತರ ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಆರಂಭದಲ್ಲಿ 500 ರಿಂದ 1000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತೆ. ಒಂದು ವಾರದ ಬಳಿಕ 5000 ಕೊವಿಡ್ ಟೆಸ್ಟಿಂಗ್ ಮಾಡಲಾಗುತ್ತದೆ. ಇನ್ನೂ, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲು ಸೂಚಿಸಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ RTPCR ತಪಾಸಣೆ ಮಾಡಬೇಕು. ಒಂದು ವೇಳೆ ಟೆಸ್ಟ್ನಲ್ಲಿ ಪಾಸಿಟಿವ್ ಬಂದ್ರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಹೇಳಿದರು.