ಕಳೆದ 24 ಗಂಟೆಗಳಲ್ಲಿ ಭಾರತವು 41,806 ಹೊಸ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೊನಾದಿಂದ 581 ಮಂದಿ ಸಾವನ್ನಪ್ಪಿದ್ದರೆ 39,130 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,09,87,880 ಆಗಿದ್ದರೆ ಒಟ್ಟು ಸಾವಿನ ಸಂಖ್ಯೆ 4,32,041 ಆಗಿದೆ. ಈವರೆಗೆ ದೇಶದಲ್ಲಿ 3,01,43,850 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 4,11,989 ಸಕ್ರಿಯ ಕೊರೊನಾ ಪ್ರಕರಣಗಳು ಇವೆ.
ಐಸಿಎಂಆರ್ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಜುಲೈ 14ರ ಒಳಗೆ ಒಟ್ಟು 43,80,11,958 ಸ್ಯಾಂಪಲ್ಗಳನ್ನ ಪರೀಕ್ಷೆ ಮಾಡಲಾಗಿದೆ. ನಿನ್ನೆ 19,43,488 ಸ್ಯಾಂಪಲ್ಗಳನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 34,97,058 ಮಂದಿಗೆ ಕೊರೊನಾ ಲಸಿಕೆಯನ್ನ ನೀಡಲಾಗಿದೆ. ಈವರೆಗೆ ಒಟ್ಟು 39,13,40,491 ಮಂದಿ ಕೊರೊನಾ ಲಸಿಕೆಯನ್ನ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.