ನವದೆಹಲಿ: 18 ರಿಂದ 45 ವರ್ಷ ವಯಸ್ಸಿನ 59 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲು 122 ಕೋಟಿ ಡೋಸ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಉನ್ನತ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ವ್ಯಾಕ್ಸಿನೇಷನ್ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಉದ್ದೇಶವನ್ನು ಸಾಧಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಈ ಬಗ್ಗೆ ಮಾಹಿತಿ ನೀಡಿದ್ದು, ಲಸಿಕೆ ಪ್ರಮಾಣಗಳ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕಡಿಮೆ ಅವಧಿಯಲ್ಲಿ ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಮಾಡುವ ಉದ್ದೇಶ ಸಾಧಿಸಲು ಪ್ರಯತ್ನ ಮಾಡಲಾಗುತ್ತಿದೆ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಭಾರತದಲ್ಲಿ ಪ್ರಸ್ತುತ ಲಭ್ಯವಿರುವ ಎರಡು ಲಸಿಕೆಗಳಾಗಿದ್ದು ಇವುಗಳನ್ನು ಆಧರಿಸಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ವ್ಯಾಕ್ಸಿನೇಷನ್ ಆದ್ಯತೆ ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಲಾಗಿದೆ.