ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಕ್ಸಿನ್ ಆರಂಭಿಸಲು ನಿರ್ಧರಿಸಿದೆ.
ಜನವರಿ 2ರಿಂದ ರಾಜ್ಯಾದ್ಯಂತ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭವಾಗಲಿದೆ. ರಾಜ್ಯದಲ್ಲಿ ಉಚಿತ ಕೋರ್ಬಿವ್ಯಾಕ್ಸಿನ್ ನೀಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವ್ಯಾಕ್ಸಿನ್ ಅಭಿಯಾನ ಆರಂಭಿಸುತ್ತಿದೆ.’
ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಹಂತದ ಡೋಸ್ 100% ಪಡೆದಿದ್ದಾರೆ. ಆದರೆ ಪ್ರಿಕಾಶನರಿ ವ್ಯಾಕ್ಸಿನ್ ಶೇ.27 ಜನರು ಮಾತ್ರ ಪಡೆದಿದ್ದಾರೆ. ಸಧ್ಯ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ಜನರು ಮೂರನೇ ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಹೀಗಾಗಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವ್ಯಾಕ್ಸಿನ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ.