ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಸರ್ಕಾರಿ ರಜಾ ದಿನಗಳು ಸೇರಿದಂತೆ ಏಪ್ರಿಲ್ ತಿಂಗಳಿನಲ್ಲಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವಂತೆ ಸೂಚನೆ ನೀಡಿದೆ.
ಸಾರ್ವಜನಿಕ ಮತ್ತು ಖಾಸಗಿ ಕೇಂದ್ರಗಳಲ್ಲಿ ಲಸಿಕೆ ನೀಡಲು ಅಗತ್ಯ ಸಿದ್ಧತೆ, ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಲಾಗಿದ್ದು, ಅತಿ ಹೆಚ್ಚು ಜನರಿಗೆ ಲಸಿಕೆ ಹಾಕಬೇಕೆಂದು ತಿಳಿಸಲಾಗಿದೆ.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಮಂತ್ರಾಲಯದಿಂದ ಈ ಕುರಿತು ಸೂಚನೆ ನೀಡಲಾಗಿದ್ದು, ಇಡಿ ತಿಂಗಳಿಗೆ ಲಸಿಕೆ ನೀಡಲು ಅಗತ್ಯವಾದ ವ್ಯವಸ್ಥೆಗಳನ್ನು ರೂಪಿಸುವಂತೆ ತಿಳಿಸಲಾಗಿದೆ. ಏಪ್ರಿಲ್ 1 ರಿಂದ ದೇಶಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ. ಈ ತಿಂಗಳು ರಜೆ ದಿನವೂ ಲಸಿಕೆ ನೀಡಲು ತಿಳಿಸಲಾಗಿದೆ.