ಕೊರೊನಾದ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕವಿದೆ. ಈ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಆಗಸ್ಟ್ ತಿಂಗಳಲ್ಲಿಯೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗಬಹುದು ಎಂದಿದ್ದಾರೆ.
ವರದಿಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಆರೋಗ್ಯ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ. ಸದ್ಯ 18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗ್ತಿದೆ.
ಸರ್ಕಾರ, ಮುಂದಿನ ತಿಂಗಳಿನಿಂದ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸುವ ಸಾಧ್ಯತೆಯಿದೆ. ಕೊರೊನಾ ಕೊಂಡಿ ಮುರಿಯಲು ಹಾಗೂ ಶಾಲೆ ತೆರೆಯಲು ಲಸಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಜೈಡಿಸ್ ಕ್ಯಾಡಿಲಾ ಮಕ್ಕಳ ಲಸಿಕೆ ತಯಾರಿಸಿದ್ದು, ತುರ್ತು ಬಳಕೆಯ ಅನುಮೋದನೆಗೆ ಕಾಯ್ತಿದೆ. ಭಾರತ್ ಬಯೋಟೆಕ್ನ ಕೋವಾಕ್ಸಿನ್ ಪ್ರಯೋಗವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಮಕ್ಕಳ ಮೇಲೆ ಪೂರ್ಣಗೊಳಿಸಬಹುದು. ಫಿಜರ್ನ ಲಸಿಕೆ ಯುಎಸ್ ನಿಯಂತ್ರಕದಿಂದ ತುರ್ತು ಬಳಕೆಯ ಅನುಮೋದನೆಯನ್ನು ಪಡೆದಿದೆ.