ಜೈಪುರ್: ಲಸಿಕೆ ನಿರೀಕ್ಷೆಯಲ್ಲಿದ್ದ ದೇಶದ ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ. ಡಿಸೆಂಬರ್ ವೇಳೆಗೆ ದೇಶದ ಎಲ್ಲಾ ಜನತೆಗೆ ಕೋವಿಡ್ ಲಸಿಕೆ ಲಭ್ಯವಿರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಕೊರೋನಾ ಪರಿಸ್ಥಿತಿ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಬಿಜೆಪಿ ಸಂಸದರೊಂದಿಗೆ ವರ್ಚುವಲ್ ಸಭೆ ನಡೆಸಿದ ಜೆ.ಪಿ. ನಡ್ಡಾ, ಕೇವಲ ಒಂಬತ್ತು ತಿಂಗಳ ಅವಧಿಯಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಎರಡು ದೇಶಿಯ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ದೇಶದ 18 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.