ಬೆಂಗಳೂರು: ಕೊರೋನಾ ಹೊಸ ತಳಿ ಬೋಟ್ಸ್ ವಾನಾ(B.1.1529) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಮೂರು ದೇಶದಲ್ಲಿ ಬೋಟ್ಸ್ ವಾನಾ ತಳಿ ಆತಂಕ ಮೂಡಿಸಿದೆ.
ಬೋಟ್ಸ್ ವಾನಾ, ದಕ್ಷಿಣ ಆಫ್ರಿಕಾ, ಹಾಂಕಾಂಗ್ ನಲ್ಲಿ ಹೊಸ ತಳಿ ಪತ್ತೆಯಾಗಿದೆ. ಇದು ವೇಗವಾಗಿ ಹರಡುತ್ತಿರುವ ತಳಿಯಾಗಿದ್ದು ಹೊಸ ತಳಿಯ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಅಧ್ಯಯನ ಕೈಗೊಂಡಿದೆ. ಕೆಲ ವಾರಗಳ ಕಾಲ ಅಧ್ಯಯನ ನಡೆಸಲಾಗುತ್ತದೆ.
ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಹೊಸ ತಳಿ ವೇಗವಾಗಿ ಹರಡಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೊಸ ತಳಿಯ ಬಗ್ಗೆ ಕೇಂದ್ರದಿಂದಲೂ ಅಲರ್ಟ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೋಟ್ಸ್ ವಾನಾ 3, ದಕ್ಷಿಣ ಆಫ್ರಿಕಾದಲ್ಲಿ 6 ಹಾಗೂ ಹಾಂಗ್ ಕಾಂಗ್ ನಲ್ಲಿ 1 ಕೇಸ್ ಕಂಡುಬಂದಿವೆ.