alex Certify BIG BREAKING: 98 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 98 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,005 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,26,775ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 442 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,42,628ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,59,819 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 93,24,328 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 33,494 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 10,65,176 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 15,26,97,399 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...