ಬೆಂಗಳೂರು: ದೇಶಾದ್ಯಂತ ಮತ್ತೆ ಮಹಾಮಾರಿ ಕೋವಿಡ್ ಆತಂಕ ಶುರುವಾಗಿದೆ. ಕೇರಳದಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿಯಾಗಿದ್ದು, ಕರ್ನಾಟಕದಲ್ಲಿಯೂ ಕಟ್ಟೆಚ್ಚರವಹಿಸಲಾಗಿದೆ.
ಕೇರಳದ ಕಣ್ಣೂರಿನಲ್ಲಿ ವೃದ್ಧರೊಬ್ಬರು ಇಂದು ಕೋವಿಡ್ ಉಪ ತಳಿ ಜೆ.ಎನ್ 1ಗೆ ಬಲಿಯಾಗಿದ್ದಾರೆ. ಕೇರಳದಲ್ಲಿ ಕಳೆದ ಹತ್ತು ದಿನಗಳಲ್ಲಿ ಮುವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದಾರೆ.
ವಿಕಾಸಸೌಧದಲ್ಲಿ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ತುರ್ತು ಸಭೆ ನಡೆದಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕಿ ಡಾ. ಪುಷ್ಪಲತಾ, ಹೆಚ್ಚುವರಿ ನಿರ್ದೇಶಕ ದಾ.ಶ್ರೀನಿವಾಸ್, ಜಂಟಿ ನಿರ್ದೇಶಕ ಡಾ.ರಜನಿ, ಆಹಾರ ಸುರಕ್ಷತೆ ಉಪ ನಿರ್ದೇಶಕ ಡಾ.ಚಂದ್ರಮೋಹನ್ ಮೊದಲಾದವರು ಭಾಗಿಯಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮತ್ತು ಮುಂಜಾಗೃತಾ ಕ್ರಮಗಳ ಬಗ್ಗೆ, ಕೋವಿಡ್ ಉಪ ತಳಿ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಹೇಗೆ ಸಜ್ಜಾಗಬೇಕು? ಯಾವ ರೀತಿ ಜನಜಾಗೃತಿ ಮೂಡಿಸಬೆಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.