ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಅದರಲ್ಲಿಯೂ ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಉಪತಳಿ JN.1ಗೆ ಸೋಂಕಿತರು ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕಟ್ಟೆಚ್ಚರದ ಬಗ್ಗೆ ಚರ್ಚೆ ನಡೆಯಿತು. ತಾಂತ್ರಿಕ ಸಲಹಾಸಮಿತಿ ಸಭೆ ಬಳಿಕ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಗೈಡ್ ಲೈನ್:
* ಆರೋಗ್ಯ ಸಮಸ್ಯೆ ಇರುವವರು ಎಚ್ಚರಿಕೆವಹಿಸಬೇಕು
* ಜ್ವರ, ಕೆಮ್ಮು, ನೆಗಡಿ ಇರುವವರು ಮಾಸ್ಕ್ ಧರಿಸಬೇಕು ಹಾಗೂ ವೈದ್ಯಕೀಯ ಸಲಹೆ ಪಡೆಯಬೇಕು
* ಆಗಾಗ ಸೋಪಿನಿಂದ ಕೈತೊಳೆಯುತ್ತಿರಬೇಕು
* ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರಿಶೀಲನೆಗೆ ಒಳಪಡಿಸಬೇಕು
* ಜನಸಂದಣಿ ಇರುವ ಪ್ರದೇಶಗಳಿಗೆ ಹೋಗಬಾರದು
* ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ಇರುವುದು ಸೂಕ್ತ
* ಅಂತರಾಷ್ಟ್ರೀಯ ಪ್ರಯಾಣದಲ್ಲಿ ಆರೋಗ್ಯದ ಬಗ್ಗೆ ಕಟ್ಟೆಚ್ಚರ
* ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸಬೇಕು
* ವಿಮಾನದ ಒಳಗೂ ಮಾಸ್ಕ ಧರಿಸಿ ಪ್ರಯಾಣ ಮಾಡಬೇಕು
* ಗಡಿ ಜಿಲ್ಲೆಗಳಲ್ಲಿ ತಪಾಸಣೆ, ವರದಿ ಆರೋಗ್ಯ ಇಲಾಖೆಗೆ ರವಾನಿಸಬೇಕು
* ಕೇರಳ, ತಮಿಳುನಾಡು ಭಾಗದ ಗಡಿಗಳಲ್ಲಿ ತಪಾಸಣೆ ಹೆಚ್ಚಳ