ನವದೆಹಲಿ: ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಎಲ್ಲಾ ಭಾರತೀಯ ವಯಸ್ಕರಿಗೆ ಲಭ್ಯವಾಗುವ ಒಂದು ದಿನದ ಮೊದಲು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಬೆಲೆಗಳನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಲಾಗಿದೆ.
ಎರಡೂ ಲಸಿಕೆ ಡೋಸ್‌ಗಳ ಬೆಲೆ ಈಗ 225 ರೂ. ಆಗಿರುತ್ತದೆ. ಕೋವಿಶೀಲ್ಡ್ ಅನ್ನು 600 ರೂ.ನಿಂದ ಕಡಿತಗೊಳಿಸಿದ್ದರೆ, ಕೋವಾಕ್ಸಿನ್ ಪ್ರತಿ ಡೋಸ್‌ಗೆ 1,200 ರೂ.ರಿಂದ ಕಡಿಮೆಯಾಗಿದೆ. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನಾವಾಲಾ ಮತ್ತು ಭಾರತ್ ಬಯೋಟೆಕ್ ಸಹ ಸಂಸ್ಥಾಪಕಿ ಸುಚಿತ್ರಾ ಎಲಾ ಇಂದು ಟ್ವಿಟರ್ ನಲ್ಲಿ ಘೋಷಣೆ ಮಾಡಿದ್ದಾರೆ. ಕೇಂದ್ರದ ಜತೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ ನಂತರ, ಖಾಸಗಿ ಆಸ್ಪತ್ರೆಗಳಿಗೆ COVISHIELD ಲಸಿಕೆ ದರವನ್ನು ಪ್ರತಿ ಡೋಸ್ ಗೆ 600 ರೂ.ನಿಂದ 225 ರೂ.ಗೆ ಪರಿಷ್ಕರಿಸಲು SII ನಿರ್ಧರಿಸಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ ಎಂದು ಪೂನಾವಾಲಾ ಟ್ವೀಟ್ ಮಾಡಿದ್ದಾರೆ.
ಎಲ್ಲಾ ವಯಸ್ಕರಿಗೆ ಮುನ್ನೆಚ್ಚರಿಕೆಯ ಡೋಸ್ ಲಭ್ಯವಾಗುವಂತೆ ಮಾಡುವ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ, ಖಾಸಗಿ ಆಸ್ಪತ್ರೆಗಳಿಗೆ COVAXIN ನ ಬೆಲೆಯನ್ನು ಪ್ರತಿ ಡೋಸ್‌ಗೆ 1200 ರೂ.ನಿಂದ 225 ರೂ.ಗೆ ಪರಿಷ್ಕರಿಸಲು ನಾವು ನಿರ್ಧರಿಸಿದ್ದೇವೆ ಎಂದು ಸುಚಿತ್ರಾ ಎಲಾ ಟ್ವೀಟ್ ಮಾಡಿದ್ದಾರೆ.
ಎರಡನೇ ಡೋಸ್ ನೀಡಿದ ಒಂಬತ್ತು ತಿಂಗಳ ನಂತರ 18 ವರ್ಷಕ್ಕಿಂತ ಮೇಲ್ಪಟ್ಟವರು ಮುನ್ನೆಚ್ಚರಿಕೆ ಡೋಸ್ ಗೆ ಅರ್ಹರಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.