ಕೋವಿಶೀಲ್ಡ್ ಕೊರೋನಾ ತಡೆ ಲಸಿಕೆ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರ ಹೆಚ್ಚಳ ಮಾಡಲಾಗಿದೆ.
ಕೋವಿಶೀಲ್ಡ್ ಮೊದಲ ಡೋಸ್ ಪಡೆದುಕೊಂಡವರು 12 ರಿಂದ 16 ವಾರಗಳಲ್ಲಿ ಎರಡನೇ ಡೋಸ್ ಪಡೆಯಬೇಕಿದೆ. ಈ ಮೊದಲು ಮೊದಲ ಡೋಸ್ ಪಡೆದುಕೊಂಡ 6 ರಿಂದ 8 ವಾರಗಳ ನಂತರ ಎರಡನೇ ಡೋಸ್ ಪಡೆಯಲು ತಿಳಿಸಲಾಗಿತ್ತು. ಆದರೆ, ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಕೋವಿಶೀಲ್ಡ್ ಲಸಿಕೆಗಳ ನಡುವಿನ ಅಂತರವನ್ನು ಹೆಚ್ಚಳ ಮಾಡಲಾಗಿದೆ. ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ಹೆಚ್ಚಳ ಮಾಡಲಾಗಿದೆ.
ಕೋವಿಶೀಲ್ಡ್ 2 ಲಸಿಕೆಗಳ ನಡುವಿನ ಅಂತರವನ್ನು 6 ರಿಂದ 8 ವಾರ ಬದಲಿಗೆ 12 ರಿಂದ 16 ವಾರಗಳಿಗೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಕೊವ್ಯಾಕ್ಸಿನ್ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನು 4 -6 ವಾರಗಳ ಅವಧಿಯಲ್ಲಿ ಪಡೆದುಕೊಳ್ಳಬೇಕಿದೆ ಎಂದು ಹೇಳಲಾಗಿದೆ.