
ಹಾಸನ: ತೋಟದ ಮನೆಗೆ ಬೆಂಕಿ ತಗುಲಿ 5 ಹಸು, ಒಂದು ಕರು ಸಜೀವದಹನವಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿಯಲ್ಲಿ ನಡೆದಿದೆ.
ಹೆಂಜಗೊಂಡನಹಳ್ಳಿಯ ಶಿವಣ್ಣ ಎಂಬುವರ ತೋಟದ ಮನೆಯಲ್ಲಿ ಘಟನೆ ನಡೆದಿದೆ. ತಫಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ತೆಂಗಿನ ಕಾಯಿಗಳು ಬೆಂಕಿಗಾಹುತಿಯಾಗಿವೆ.
ರಾತ್ರಿ, ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ಶಿವಣ್ಣ ಮನೆಗೆ ಬಂದಿದ್ದರು. ಬೆಳಗ್ಗೆ ಹಾಲು ಕರೆಯಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.