
ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಇದರೊಂದಿಗೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.
ರಾಜ್ಯದಲ್ಲಿ ಗೋವು ಸಾಗಾಣಿಕೆ, ಹತ್ಯೆಗೆ ನಿರ್ಬಂಧಿಸಲಾಗಿದೆ. ಹತ್ಯೆಗಾಗಿ ಜಾನುವಾರು ಮಾರಾಟ ಮತ್ತು ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಹತ್ಯೆಗಾಗಿ ಗೋವು ಮಾರಾಟ ಮಾಡಿದರೆ ಜಾನುವಾರು ಜಪ್ತಿ ಮಾಡಲಾಗುತ್ತದೆ. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ 7 ವರ್ಷದವರೆಗೆ ಜೈಲು. 50 ಸಾವಿರ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.