ಬೆಂಗಳೂರು: ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ.
ರಾಜ್ಯದಲ್ಲಿ ಜಾನುವಾರು ಸಾಕಾಣಿಕೆ, ಹತ್ಯೆಗೆ ನಿರ್ಬಂಧವಿದೆ. ಹತ್ಯೆಗಾಗಿ ಜಾನುವಾರು ಮಾರಾಟ ಮತ್ತು ಖರೀದಿಸಲು ನಿರ್ಬಂಧ ವಿಧಿಸಲಾಗಿದೆ. ಹತ್ಯೆಗಾಗಿ ಮಾರಾಟ ಮಾಡಿದರೆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ 3 ವರ್ಷದಿಂದ 7 ವರ್ಷದವರೆಗೆ ಜೈಲು ಶಿಕ್ಷೆ, 50 ಸಾವಿರ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು. ಕೃಷಿ ಮತ್ತು ಪಶುಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಹೇಳಲಾಗಿದೆ.