alex Certify SHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದ ಕಳ್ಳರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ.

ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೂದು ಬಣ್ಣದ ಟೊಯೊಟಾ ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು, ಮಂಕಿ ಕ್ಯಾಪ್ ಹಾಕಿಕೊಂಡು ಬಂದು ಆಕಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಹಸು ಕದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಕಾರನ್ನು ಅಡ್ಡಗಟ್ಟಲು ಮುಂದಾಗಿದ್ದಾರೆ. ಈ ವೇಳೆ ಖದೀಮರು ಜನರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾರೆ. ಇದರಿಂದ ಜೀವ ಭಯದಲ್ಲಿ ಸ್ಥಳೀಯರು ಹಿಂದೆಸರಿದಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರು ದೂರು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇತ್ತೀಚೆಗೆ ಹಸು ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...