
ಕುಣಿಗಲ್: ಮೂರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕುಣಿಗಲ್ ನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ವೇಳೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಬೇಕಿತ್ತು. ಲೋಕಸಭೆ ಚುನಾವಣೆ ದೃಷ್ಟಿಯಿಂದ ಅಧಿಕಾರದಲ್ಲಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕ್ಷೇತ್ರಗಳಿಗೆ ಯಾವುದೇ ಅನುದಾನ ಕೊಡದ ಕಾರಣ ನಿತ್ಯವೂ ಜನರಿಂದ ಬೈಸಿಕೊಳ್ಳಬೇಕಾಗಿದೆ. ಶಾಸಕರಾಗಿದ್ದರೂ ನಿಷ್ಪ್ರಯೋಜಕರಾಗಿದ್ದೇವೆ ಎಂದು ಸುಮಾರು 60 ಶಾಸಕರು ಮಾತನಾಡುತ್ತಿದ್ದಾರೆ. ಕೆಲವು ಶಾಸಕರು ಸಂಪರ್ಕದಲ್ಲಿದ್ದು, ಈ ಸರ್ಕಾರ ತೆಗೆದು ಬಿಡು ಎಂದು ನನ್ನ ಬಳಿ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.