ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಿ.ಪಿ ಯೋಗೀಶ್ವರ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ನಂದಿಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಹಿನ್ನೆಲೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಸಿ.ಪಿ ಯೋಗೀಶ್ವರ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ್ರು.
ಫಲಿತಾಂಶ ಬಂದಾಯ್ತಲ್ಲ……ನಾವು ಪರೀಕ್ಷೆಯಲ್ಲಿ ಪಾಸಾಗಿದ್ದೇವೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆ ಫಿಕ್ಸ್ ಎಂಬಂತೆ ಪರೋಕ್ಷ ಹೇಳಿಕೆ ನೀಡಿದ್ದಾರೆ.