alex Certify ವಿಮಾನ ನಿಲ್ದಾಣದಿಂದ ಸೀದಾ ಆಸ್ಪತ್ರೆಗೆ ಭೇಟಿ ನೀಡಿ ಸಿಪಿಐ ಆರೋಗ್ಯ ವಿಚಾರಿಸಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ನಿಲ್ದಾಣದಿಂದ ಸೀದಾ ಆಸ್ಪತ್ರೆಗೆ ಭೇಟಿ ನೀಡಿ ಸಿಪಿಐ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿಪಿಐ ಶ್ರೀಮಂತ್ ಇಲ್ಲಾಳ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲಬುರ್ಗಿ ಗ್ರಾಮಾಂತರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ ಅವರು ಗಾಂಜಾ ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದರು.

ಮಹಾರಾಷ್ಟ್ರದ ಗಡಿ ಭಾಗದಲ್ಲಿ ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾದ ಶ್ರೀಮಂತ ಇಲ್ಲಾಳ ಅವರನ್ನು ಕಲ್ಬುರ್ಗಿಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ನಂತರ ಶ್ರೀಮಂತ್ ಇಲ್ಲಾಳ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಕೊಲ್ಲಾಪುರದಿಂದ ಹಿಂತಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವಿಮಾನ ನಿಲ್ದಾಣದಿಂದ ಸೀದಾ ಆಸ್ಪತ್ರೆಗೆ ತೆರಳಿ ಶ್ರೀಮಂತ್ ಇಲ್ಲಾಳ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಅವರೊಂದಿಗೆ ಸಚಿವರಾದ ವಿ. ಸೋಮಣ್ಣ, ಮುರುಗೇಶ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...