
ನವದೆಹಲಿ: ಕರ್ನಾಟಕದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಬಗೆಹರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ರಾಜ್ಯಸಭೆ ಸಿಪಿಐ -ಎಂ ಸದಸ್ಯ ಎಲ್ಮರಮ್ ಕರೀಂ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕು. ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಪತ್ರ ಬರೆದಿದ್ದಾರೆ. ವಿದ್ಯಾರ್ಥಿಗಳ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರೀಂ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.