ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ಬಂದ್ ಗೆ ಕರೆ ನೀಡಲಾಗಿದೆ. ಬಿಜೆಪಿ, ಜೆಡಿಎಸ್, ದಲಿತ ಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಮಂಜುನಾಥ್ ನಾಯಕ್ ಅಮಾನತು ಹಿಂಪಡೆಯುವಂತೆ ಒತ್ತಾಯಿಸಲಾಗಿದೆ. ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಖಾನಾಪುರ ಬಂದ್ ಗೆ ಸಹಕರಿಸುವಂತೆ ಕೋರಲಾಗಿದೆ.