ಬೆಂಗಳೂರು: ಮರ್ಯಾದೆಗೇಡು ಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಮಧು ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.
ಜೂನ್ 27ರಂದು ಬೋಡಗುರ್ಕಿಯಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿತ್ತು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಗಳು ಕೀರ್ತಿ ಕತ್ತು ಹಿಸುಕಿ ತಂದೆ ಕೃಷ್ಣಮೂರ್ತಿ ಕೊಲೆ ಮಾಡಿದ್ದರು. ಎಸ್.ಸಿ. ಸಮುದಾಯದ ಗಂಗರಾಜುನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದರು.
ಪ್ರಿಯತಮೆ ಹತ್ಯೆಯಾದ ವಿಚಾರ ತಿಳಿದು ಗಂಗರಾಜು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮರ್ಯಾದಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಕಾಮಸಮುದ್ರ ಸಿಪಿಐ ಮಧು ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಿದ್ದಾರೆ.