ಸಿಪಿಐ(ಎಂ) ನಾಯಕಿ ಕೆ.ಕೆ. ಶೈಲಜಾ ಅವರು ಪಕ್ಷದೊಂದಿಗೆ ಮಾತುಕತೆ ನಡೆಸಿದ ನಂತರ ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ್ದಾರೆ.
ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ್ದಾರೆ. ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿ ವಿಶೇಷವಾಗಿ ನಿಪಾ ವೈರಸ್ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಅವಧಿಯಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ 64 ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಪರಿಗಣಿಸಲಾಗಿದೆ.
ನೊಬೆಲ್ ಪ್ರಶಸ್ತಿಯ ಏಷ್ಯನ್ ಆವೃತ್ತಿ ಎಂದು ಪರಿಗಣಿಸಲಾದ ಮ್ಯಾಗ್ಸೆಸೆ ಪ್ರಶಸ್ತಿ ಸ್ವೀಕರಿಸಬಾರದು ಎಂದು ಪಕ್ಷದ ಸೂಚನೆಯ ನಂತರ ಪ್ರಶಸ್ತಿ ತಿರಸ್ಕರಿಸಿದ ಬಗ್ಗೆ ಶೈಲಜಾ ಮಾಹಿತಿ ನೀಡಿದ್ದಾರೆ.
1957 ರಲ್ಲಿ ಸ್ಥಾಪಿತವಾದ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯು ಏಷ್ಯಾದ ಅತ್ಯುನ್ನತ ಗೌರವವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ ಏಷ್ಯಾದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರತಿ ವರ್ಷ ಪಿಲಿಪೈನ್ ನಿಂದ ಈ ಪ್ರಶಸ್ತಿ ನೀಡಲಾಗುತ್ತದೆ.